ಕಲ್ಲಡ್ಕದ ಗಲಭೆಯಲ್ಲಿ ಮಾರಣಾಂತಿಕವಾಗಿ ಗಾಯಗೊಂಡ ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ ಹಾಗೂ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸಾಂತ್ವನ ಹೇಳಿದರು. ಎಲ್ಲರಿಗೂ ಧೈರ್ಯ ತುಂಬಿದ ಅವರು ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಮತ್ತು ಆರೋಪಿಗಳ ಬಂಧನಕ್ಕೆ ಪೋಲಿಸ್ ಇಲಾಖೆಗೆ ಸೂಚಿಸಿದರು. ರಾಜ್ಯ ಸರಕಾರದ ತುಷ್ಟೀಕರಣ ನೀತಿಯನ್ನು ಖಂಡಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜಿ.ಆನಂದ, ಸತ್ಯಜಿತ್ ಸುರತ್ಕಲ್, ಅರುಣ್ ಪುತ್ತಿಲ, ಅರುಣ್ ವಿಟ್ಲ ಜತೆಗಿದ್ದರು.