ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನಾಚರಣಾ ಸಮಿತಿ ಹಾಗೂ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ಇವರ ಜಂಟಿ ಸಹಯೋಗದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ನಿಮಿತ್ತ ಶಿಕ್ಷಕರ ದಿನಾಚರಣೆಯನ್ನು ಪುತ್ತೂರಿನ ಗುರುಭವನದಲ್ಲಿ ದಿನಾಂಕ 5-9-2017 ರಂದು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಶಕುಂತಳಾ ಶೆಟ್ಟಿ ಮತ್ತಿನ್ನಿತರರು ಪಾಲ್ಗೊಂಡಿದ್ದರು.