ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾದ ವಲೇರಿಯನ್ ಕುಟ್ಟಿನ್ಹ ಇವರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಮತ್ತು ಬಿಜೆಪಿ ಮುಖಂಡರ, ಕಾರ್ಯಕರ್ತರ ಮೇಲೆ ಕುಮ್ಮಕ್ಕಿನಿಂದ ಸುಳ್ಳು ಕೇಸುಗಳನ್ನು ದಾಖಲಿಸಿರುವ ಪೊಲೀಸ್ ಇಲಾಖೆ ವಿರುದ್ಧ ಬಿಜೆಪಿ ಮೂಲ್ಕಿ-ಮೂಡಬಿದರೆ ಕ್ಷೇತ್ರದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯಲ್ಲಿ ಚಿಕ್ಕಮಗಳೂರು ಶಾಸಕ ಸಿ. ಟಿ. ರವಿ ಅವರ ಜೊತೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಪಾಲ್ಗೊಂಡಿದ್ದರು. ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.