Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಸಾಹಿತ್ಯ ಕ್ಷೇತ್ರಗಳಲ್ಲಿ ವ್ಯಾಪಾರಿ ಮನೋಭಾವ ಅಪಾಯಕಾರಿ

ಬಂಟ್ವಾಳ : ಸಂಗೀತ, ಸಾಹಿತ್ಯ, ಪುಸ್ತಕ ಕ್ಷೇತ್ರಗಳಲ್ಲಿ ವ್ಯಾಪಾರಿ ಮನೋಭಾವಗಳು ಬೆಳೆಯುತ್ತಿದೆ. ಇದರಿಂದ ಅಪಾಯಗಳೇ ಹೆಚ್ಚು. ಜನಪದ ಸಾಹಿತ್ಯಗಳು ನೀಡುವ ಅದ್ಭುತ ಸಂದೇಶಗಳು ಈಗಿನ ಚಲನಚಿತ್ರ ಹಾಡುಗಳಲ್ಲಿ ಸ್ವಲ್ಪವೂ ಕಾಣಿಸುತ್ತಿಲ್ಲ. ಸಾಹಿತ್ಯವೂ ಕೀಳು ಮಟ್ಟಕ್ಕೆ ಇಳಿದುದರಿಂದ ಅಪಾಯಕಾರಿಯಾಗಿ ಗೋಚರಿಸುತ್ತಿದೆ ಎಂದು ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅಭಿಪ್ರಾಯ ಪಟ್ಟಿದ್ದಾರೆ.

11

13
ಅವರು ಬುಧವಾರ ಸಂಜೆ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ದ.ಕ.ಜಿಲ್ಲಾ ಕಸಾಪ ಸಹಯೋಗದೊಂದಿಗೆ ಬಿ.ಸಿ.ರೋಡಿನ ಪ್ರೆಸ್‌ಕ್ಲಬ್ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಪುಸ್ತಕ ಮೇಳ-ಸಾಹಿತ್ಯ ಸಂವಾದದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದರು. ಪುಸ್ತಕ ಜ್ಞಾನ ಭಂಡಾರವನ್ನು ಹೆಚ್ಚಿಸುವ ಸಾಧನವಾಗಿದೆ. ಆದರೆ ಅದನ್ನು ಓದುವವರ ಸಂಖ್ಯೆ ಕಡಿಮೆಯಾಗುತ್ತಿದ್ದು ಎಲ್ಲದಕ್ಕೂ ಅಂತರ್ಜಾಲವನ್ನು ಅವಲಂಬಿಸುವ ಕಾರ್ಯ ನಡೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ವಿಭಿನ್ನ ಚಿಂತನೆಯ ಪುಸ್ತಕ ಮೇಳವನ್ನು ಆಯೋಜಿಸುವ ಮೂಲಕ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದೆ ಎಂದು ಅಭಿನಂದಿಸಿದರು.

ಬಂಟ್ವಾಳ ಪುರಸಭೆ ಅಧ್ಯಕ್ಷೆ ವಸಂತಿ ಚಂದಪ್ಪ ಮಾತನಾಡಿ ಪುಸ್ತಕ ಮೇಳವನ್ನು ಆಯೋಜಿಸುವ ಮೂಲಕ ಇಲ್ಲಿನ ಜನರಲ್ಲಿ ಓದುವ ಹವ್ಯಾಸಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇಂತಹ ಸಮಾಜಮುಖಿ ಕಾರ್ಯಗಳು ಪತ್ರಕರ್ತರಿಂದ ನಿರಂತರವಾಗಿ ನಡೆಯಲಿ ಎಂದರು. ಬಂಟ್ವಾಳ ತಾಲೂಕು ಕಸಾಪ ಅಧ್ಯಕ್ಷ ಜಯಾನಂದ ಪೆರಾಜೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಇಬ್ರಾಹಿಂ ಅಡ್ಕಸ್ಥಳ, ಕಾರ್ಯದರ್ಶಿ ವೆಂಕಟೇಶ್ ಬಂಟ್ವಾಳ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೌನೇಶ್ ವಿಶ್ವಕರ್ಮ ಸ್ವಾಗತಿಸಿದರು. ಕಾರ್ಯದರ್ಶಿ ರತ್ನದೇವ್ ಪುಂಜಾಲಕಟ್ಟೆ ವಂದಿಸಿದರು. ಕೋಶಾಧಿಕಾರಿ ಸಂದೀಪ್ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Highslide for Wordpress Plugin