ಕರ್ನಾಟಕ ರಾಜ್ಯದಲ್ಲಿ, ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರಕಾರದ ಪ್ರೋತ್ಸಾಹ ಹಾಗೂ ಪೊಲೀಸ್ ಇಲಾಖೆಯ ವೈಫಲ್ಯದಿಂದ ಮತಾಂಧ ಶಕ್ತಿಗಳ ಅಟ್ಟಹಾಸ ಮೆರೆಯುತ್ತಿದ್ದು, ಹಿಂದುಗಳು ಹಾಗೂ ಸಂಘಪರಿವಾರ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ನಡೆಸುವ ಹತ್ಯೆಗಳು, ದಾಳಿ, ಆಕ್ರಮಣಗಳಿಂದಾಗಿ ಜನ ಸಾಮಾನ್ಯರು ಭಯಭೀತರಾಗಿದ್ದಾರೆ. ಇಷ್ಟೆಲ್ಲ ಘಟನೆಗಳು ನಡೆದರೂ ಜಿಲ್ಲೆಯ ಸಚಿವರುಗಳು ಓಟ್ ಬ್ಯಾಂಕ್ ರಾಜಕಾರಣದಿಂದ ಮೌನವಾಗಿರುವುದು ಖಂಡನೀಯ. ಇದನ್ನು ಖಂಡಿಸಿ ದಿನಾಂಕ 21-11-2016 ರಂದು ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಹಿಂದು ಹಿತರಕ್ಷಣಾ ಸಮಿತಿ ವತಿಯಿಂದ ಬೃಹತ್ ಧರಣಿ ಸತ್ಯಾಗ್ರಹವನ್ನು ಏರ್ಪಡಿಸಲಾಗಿತ್ತು. ಈ ಸತ್ಯಾಗ್ರಹಕ್ಕೆ ದ.ಕ. ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಿದ್ದು, ಧರಣಿಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.