Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಉಡುಪಿಯಲ್ಲಿ ಅಭಿನಂದನಾ ಕಾರ್ಯಕ್ರಮ

ಉಡುಪಿ ಪ್ರವಾಸದ ಸಂದರ್ಭದಲ್ಲಿ ನಗರಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ನಳಿನ್ ಕುಮಾರ್ ಕಟೀಲ್ ಅವರನ್ನು ಅಭೂತಪೂರ್ವವಾಗಿ ಸ್ವಾಗತಿಸಿದ ಉಡುಪಿ ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷದ ನಾಯಕರು ಉಡುಪಿಯ ತಾಲೂಕು ಕಚೇರಿಯಿಂದ ಸರ್ವಿಸ್ ಬಸ್ ಸ್ಟಾಂಡ್­ನವರೆಗೆ ತೆರೆದ ವಾಹನದಲ್ಲಿ ಮೆರವಣಿಗೆಯ ಮುಖಾಂತರ ಸಾಗಿದರು. ನಂತರ ಉಡುಪಿಯ ಕಿದಿಯೂರು ಹೋಟೆಲಿನ ಶೇಷಶಯನ ಸಭಾಂಗಣದಲ್ಲಿ ನೂತನ ರಾಜ್ಯಾಧ್ಯಕ್ಷರಿಗೆ ಬೃಹತ್ ಅಭಿನಂದನಾ ಸಭೆ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕರಾದ ಶ್ರೀ ರಘುಪತಿ ಭಟ್, ಕಾರ್ಕಳ ಶಾಸಕರಾದ ಶ್ರೀ ಸುನಿಲ್ ಕುಮಾರ್, ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಮಟ್ಟಾರು ರತ್ನಾಕರ ಹೆಗ್ಡೆ, ಇನ್ನಿತರ ನಾಯಕರು ಹಾಗೂ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Highslide for Wordpress Plugin