ಉಳ್ಳಾಲ ಗಲಭೆಯಲ್ಲಿ ನಿರಪರಾಧಿಗಳನ್ನು ಬಂಧಿಸಲಾಗಿದೆ ಪೋಲಿಸ್ ತನಿಖೆಗಳು ರಾಜಕೀಯ ಒತ್ತಡದಿಂದ ನಡೆಯುತ್ತಿದೆ ಮಹಿಳೆಯರು ಹಾಗೂ ಮಕ್ಕಳನ್ನು ವಿನಾಕಾರಣ ತೊಂದರೆ ನೀಡಲಾಗಿದೆ ಈ ನಿಟ್ಟಿನಲ್ಲಿ ಪೋಲಿಸ್ ಇಲಾಖೆ ನಿಜವಾದ ಅಪರಾಧಿಗಳನ್ನು ಪತ್ತೆ ಹಚ್ಚಿ ಇಂತಹ ಘಟನೆ ಜಿಲ್ಲೆಗೆ ಹರಡದಂತೆ ಹಾಗೂ ನಿರಪರಾಧಿಗಳಿಗೆ ಶಿಕ್ಷೆ ಆಗದಂತೆ ಕಾರ್ಯ ನಿರ್ವಹಿಸಬೇಕೆಂದು ಸಂಸದ ನಳಿನ್ ಕುಮಾರ್ ಆಗ್ರಹಿಸಿದ್ದಾರೆ. ಅವರು ನಿನ್ನೆ ಉಳ್ಳಾಲ ಪ್ರದೇಶಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಪೋಲೀಸರು ತಡೆದ ಬಳಿಕ ಪತ್ರಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ ಬಿಜೆಪಿ ಮುಖಂಡರಾದ ಚಂದ್ರಹಾಸ್ ಉಚ್ಚಿಲ್ ಸತೀಶ್ ಕುಂಪಲ ಮುಂತಾದವರು ಉಪಸ್ಥೀತರಿದ್ದರ .