Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್

ರೈತರು, ಮೀನುಗಾರರು, ಉದ್ದಿಮೆದಾರರ ಸಹಿತ ಎಲ್ಲ ವರ್ಗದ ಜನತೆಯ ಹಿತ ಕಾಯುವ ಬಜೆಟ್ ಮಂಡನೆಯಾಗಿದೆ. ದೇಶದ ಜನತೆಯ ನಿರೀಕ್ಷೆಗೆ ತಕ್ಕಂತೆ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ನಡೆದಿದೆ.

ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಸಬಲೀಕರಣಕ್ಕೆ ವಿಶೇಷ ಆದ್ಯತೆ ಕಲ್ಪಿಸಿದ್ದಾರೆ. ಪ್ರಧಾನ ಮಂತ್ರಿ ಮತ್ಸೃ ಸಂಪದ ಯೋಜನೆ ಕರಾವಳಿಯ ಮೀನುಗಾರರಿಗೆ ವರದಾನವಾಗಲಿದೆ. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಹಂತ 3 ರಲ್ಲಿ 80,850 ಕೋಟಿ ರೂ. ವೆಚ್ಚದಲ್ಲಿ 1 ಲಕ್ಷದ 25 ಸಾವಿರ ಕಿ.ಮೀ. ರಸ್ತೆ ಮೇಲ್ದರ್ಜೆಗೇರಲಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅಭಿವೃದ್ದಿ ಸಾಧ್ಯವಾಗಲಿದೆ. 10 ಸಾವಿರ ರೈತ ಉತ್ಪಾದಕ ಸಂಸ್ಥೆಗಳ ಸ್ಥಾಪನೆ, 2024 ರ ವೇಳೆಗೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಶುದ್ಧ ಕುಡಿಯುವ ನೀರು ಒದಗಿಸಲು ಹರ್‌ಘರ್ ಜಲ್ ಯೋಜನೆ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 1.95 ಕೋಟಿ ಮನೆಗಳ ನಿರ್ಮಾಣ, 2022 ರ ವೇಳೆಗೆ ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೆ ವಿದ್ಯುತ್ ಮತ್ತು ಎಲಪಿಜಿ ಸಂಪರ್ಕ ಎಲ್ಲವೂ ದೇಶದ ಸರ್ವಾಂಗೀಣ ಅಭಿವೃದ್ದಿಗೆ ಕೈಗೊಂಡ ದಿಟ್ಟ ಕ್ರಮಗಳಾಗಿದೆ. ಮೂಲ ಸೌಕರ್ಯಕ್ಕೆ ಅತಿ ಹೆಚ್ಚು ಆದ್ಯತೆ ನೀಡಿರುವುದು, ಖಾಸಗಿ  ಸಹಭಾಗಿತ್ವದಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವುದು ಸ್ವಾಗತಾರ್ಹ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

Highslide for Wordpress Plugin