ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಇಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ದ. ಕ. ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ ವೇದವ್ಯಾಸ್ ಕಾಮತ್, ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಮತ್ತು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.