Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಜಿಲ್ಲಾ ಕಾರ್ಯಕಾರಿಣಿ ಸಭೆ

ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಕಾರಿಣಿ ಸಭೆಯು ಮತ್ತು ಮಹಾ ಸಂಪರ್ಕ ಅಭಿಯಾನದ ಕಾರ್ಯಗಾರ ಈ ದಿನ ದಿನಾಂಕ 06-06-2015 ರಂದು ಪಕ್ಷದ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷರಾದ ಪ್ರತಾಪಸಿಂಹ ನಾಯಕ್‌ರವರ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಸಂಸದರ ನಿಧಿ ಬಳಕೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್‌ರವರನ್ನು ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು.

IMG_3971[1]

IMG_3981[1]

IMG_3961[1]

ಇತ್ತೀಚೆಗೆ ನಡೆದ ಸದಸ್ಯತ್ವದ ಸಂಪರ್ಕ ಅಭಿಯಾನದ ಕಾರ್ಯಗಾರದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ಭಾನುಪ್ರಕಾಶ್ ರವರು ಕಾರ್ಯಕರ್ತರಿಗೆ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ಜಿಲ್ಲೆಯಾದ್ಯಂತ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಮನೆ ಮನೆ ಸಂಪರ್ಕದ ಮೂಲಕ ಪಕ್ಷದ ಹಾಗೂ ಕೇಂದ್ರ ಸರಕಾರದ ಕಾರ್ಯಕ್ರಮಗಳನ್ನು ಜನತೆಗೆ ತಿಳಿಸುವಂತೆ ಸಂಪರ್ಕ ಅಭಿಯಾನದ ಉದ್ದೇಶವನ್ನು ವಿವರಿಸಿದರು.

ವೇದಿಕೆಯಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್ ವಿಧಾನ ಪರಿಷತ್ ಸಂಸದರಾದ ಕ್ಯಾ|ಗಣೇಶ್ ಕಾರ್ಣಿಕ್ ಸಂಪರ್ಕ ಅಭಿಯಾನದ ರಾಜ್ಯ ಸಹ ಸಂಚಾಲಕರಾದ ಶ್ರೀ ಕೆ.ಮೋನಪ್ಪ ಭಂಡಾರಿ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾ ತಿಮ್ಮಪ್ಪ, ಜಿಲ್ಲಾ ಪ್ರಭಾರಿ ಲಾಲಾಜಿ ಮೆಂಡನ್ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜೀವ ಮಠಂದೂರು ಸ್ವಾಗತಿಸಿದರು.

Highslide for Wordpress Plugin