Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಜಿಲ್ಲೆಯಾದ್ಯಂತ ಸುಮಾರು 100 ಜನ ಔಷಧಿ ಕೇಂದ್ರಗಳನ್ನು ತೆರೆಯುವ ಯೋಜನೆ ಮಾಡಲಾಗಿದೆ

ಫರಂಗಿಪೇಟೆ: ಸೇವೆಯೇ ಪರಮೋ ಧರ್ಮ ಎಂಬ ಧ್ಯೇಯವನ್ನು ಇಟ್ಟುಕೊಂಡು ಲಾಭದ ದೃಷ್ಟಿ ಇಲ್ಲದೆ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರಗಳನ್ನು ಜಿಲ್ಲೆಯಾದ್ಯಂತ ಸುಮಾರು 100  ಕೇಂದ್ರಗಳನ್ನು ತೆರೆಯುವ ಯೋಜನೆ ಮಾಡಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಇವರು ಪುದು ಗ್ರಾಮದ ಫರಂಗಿಪೇಟೆಯಲ್ಲಿ ನೂತನವಾಗಿ ಆರಂಭಗೊಡ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

Janushadhi

ಈ ಪರಿಯೋಜನೆಯ ಸುಪೀರಿಯರ್ ಮೆಡಿಕಲ್ ಆಫೀಸರ್­ರಾದ ಡಾ|| ಅನಿಲ ದೀಪಕ್ ಶೆಟ್ಟಿಯವರು ಮಾತನಾಡಿ ಈಗಾಗಲೇ ಈ ಯೋಜನೆಯ ಅಡಿಯಲ್ಲಿ 752 ಔಷಧಿಗಳು ಸುಮಾರು 100 ಸರ್ಜಿಕಲ್ ಪರಿಕರಗಳಿದ್ದು ಬರೀ ಉತ್ಪಾದನಾ ವೆಚ್ಚದಲ್ಲಿ ಪೂರೈಸಲಾಗುವುದು. ರಾಜ್ಯದಾದ್ಯಂತ 85 ಸರಕಾರಿ ಆಸ್ಪತ್ರೆಗಳಲ್ಲಿ ಈ ಕೇಂದ್ರವನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಪ್ರತೀ ಗ್ರಾಮಗಳಿಗೂ ಪ್ರತೀ ಮನೆಗಳಿಗೂ ತಲುಪುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಒಡಿಯೂರಿನ ಶ್ರೀಗಳಾದ ಗುರುದೇವಾನಂದ ಸ್ವಾಮೀಜಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಫರಂಗಿಪೇಟೆ ಚರ್ಚ್‌ನ ಧರ್ಮಗುರುಗಳಾದ ಫಾದರ್ ದಿಲ್ ರಾಜ್ ರವರು ಕೇಂದ್ರ ಜುಮ್ಮಾ ಮಸೀದಿಯ ಅಧ್ಯಕ್ಷರಾದ ಮಹಮ್ಮದ್ ಬಾವರವರು ಜೊತೆಗಿದ್ದರು. ಎನ್ ರವೀಂದ್ರ ಶೆಟ್ಟಿ ನುಳಿಯಾಲ್ ಗುತ್ತು ಆಡಳಿತ ಮೋಕ್ತೆಸರರು ವಿಷ್ಣುಮೂರ್ತಿ ದೇವಸ್ಥಾನ ಸಂಪ್ಯ ಪುತ್ತೂರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ರವೀಂದ್ರ ಕಂಬಳಿ, ಮಾಜಿ ಶಾಸಕರಾದ ರುಕ್ಮಯ್ಯ ಪೂಜಾರಿ, ಮಾತೃಭೂಮಿ ಸೌಹಾರ್ದ ಸಹಕಾರಿ ಗುರುಪುರ ಇದರ ಆಡಳಿತ ನಿರ್ದೇಶಕರಾದ ಕೃಷ್ಣ ಕೊಂಪದವು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಾಲಕರಾದ ಅರುಣ್ ಕುಮಾರ್ ಶೆಟ್ಟಿ ನುಳಿಯಾಲ್ ಗುತ್ತು ರವರು ಸ್ವಾಗತಿಸಿದರು. ಗಣೇಶ್ ದತ್ತನಗರ ಕಾರ್ಯಕ್ರಮ ನಿರ್ವಹಿಸಿದರು.

Highslide for Wordpress Plugin