ಮಂಗಳೂರು : ಬಿ.ಜೆ.ಪಿ. ಆರ್ಥಿಕ ಪ್ರಕೋಷ್ಠದ ವತಿಯಿಂದ ಜಿ.ಎಸ್.ಟಿ. ಕಾರ್ಯಾಗಾರ (ಜಿ.ಎಸ್.ಟಿ ಸೆಮಿನಾರ್) ಇಂದು ದಿನಾಂಕ 29-6-2017 ರಂದು ನಗರದ ಹೋಟೆಲ್ ಓಶಿಯನ್ ಪರ್ಲ್ನಲ್ಲಿ ನಡೆಯಿತು. ಉದ್ಘಾಟನೆಯನ್ನು ಸಂಸದರಾದ ನಳಿನ್ ಕುಮಾರ್ ಕಟೀಲ್ರವರು ನೆರವೇರಿಸಿದರು. ಬಿಜೆಪಿ ಆರ್ಥಿಕ ಪ್ರಕೋಷ್ಠದ ಸಂಚಾಲಕರಾದ ಸಿ.ಎ. ಶಾಂತರಾಮ ಶೆಟ್ಟಿ, ಮುಖ್ಯ ಅತಿಥಿಗಳಾಗಿ, ಸಿ.ಎ. ಪ್ರವೀಣ್ ಶೆಟ್ಟಿ, ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾದ ವೇದವ್ಯಾಸ್ ಕಾಮತ್, ಜಿಲ್ಲಾ ಕೋಶಾಧಿಕಾರಿ ಸಂಜಯ್ ಪ್ರಭು, ಸಂಪನ್ಮೂಲ ವ್ಯಕ್ತಿಯಾಗಿ ಸಿ.ಎ.ಅಮಿತ್ ಪೈ ಕಾರ್ಯಾಗಾರದ ಮಾಹಿತಿ ನೀಡಿದರು. ನಗರದ ಉದ್ಯಮಿಗಳು, ಲೆಕ್ಕ ಪರಿಶೋಧಕರು ಮುಂತಾದ ಪ್ರಮುಖರು ಭಾಗವಹಿಸಿದರು.