ಬೆಳ್ತಂಗಡಿ : ದ. ಕ. ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ, ಬೆಳ್ತಂಗಡಿ, ಗ್ರಾಮ ಪಂಚಾಯತ್, ನಾರಾವಿ ಇವುಗಳ ಸಹಭಾಗಿತ್ವದಲ್ಲಿ ನೂತನ ಪಂಚಾಯತ್ ಕಟ್ಟಡ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ದಿನಾಂಕ 29-08-2016 ರಂದು ನಾರಾವಿ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು.
ನೂತನ ಪಂಚಾಯತ್ ಕಟ್ಟಡ ಉದ್ಘಾಟನೆ ಮತ್ತು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ದ. ಕ. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿದರು.