ಮಂಗಳೂರು : 2016-17 ನೇ ಸಾಲಿನ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು, ಸಿಬ್ಬಂದಿವರ್ಗವನ್ನು ಎಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರನ್ನು, ಉಪನ್ಯಾಸಕರನ್ನು ಹಾಗೂ ಕಠಿಣ ಪರಿಶ್ರಮದ ಮೂಲಕ ಈ ಖ್ಯಾತಿಗೆ ಪಾತ್ರರಾದ ವಿದ್ಯಾರ್ಥಿಗಳನ್ನು ಹಾಗೂ ಅವರ ಪೋಷಕರನ್ನು ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ರವರು ಹಾರ್ದಿಕವಾಗಿ ಅಭಿನಂದಿಸಿದ್ದಾರೆ.
ಶಿಕ್ಷಣ ಇಲಾಖೆ ಹಾಗೂ ಬೋಧಕ ವರ್ಗ ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯು ಅಗ್ರ ಸ್ಥಾನಕ್ಕೆರುವಂತಾಗುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ವಿನಂತಿಸಿದ್ದಾರೆ. ಅದ್ಬುತ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಭಗವಂತ ಯಶಸ್ಸನ್ನು ಹಾಗೂ ಉಜ್ವಲ ಭವಿಷ್ಯವನ್ನು ದಯಪಾಲಿಸಲಿ ಎಂದು ಸಂಸದರು ಪತ್ರಿಕಾ ಪ್ರಕಟಣೆಯ ಮೂಲಕ ಹಾರೈಸಿದ್ದಾರೆ.