ದಿನಾಂಕ 6-6-2017 ರಂದು ಮಂಗಳೂರಿಗೆ ಆಗಮಿಸಿದ ಕೇಂದ್ರ ಕಾನೂನು ಮತ್ತು ನ್ಯಾಯ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಖಾತೆ ಸಚಿವ ಶ್ರೀ ಪಿ.ಪಿ.ಚೌಧರಿ ಇವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು ಮತ್ತಿತರರು ಹಾಜರಿದ್ದರು.