ಬಂಟ್ವಾಳದಲ್ಲಿ ಆರ್.ಎಸ್.ಎಸ್. ಕಾರ್ಯಕರ್ತ ಶರತ್ ಮೇಲೆ ನಡೆದಿರುವ ಕೊಲೆ ಯತ್ನ ಹಾಗೂ ಇತ್ತೀಚಿನ ದಿನಗಳಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ ದಿನಾಂಕ 7-7-2017 ರಂದು ಬಿ.ಸಿ.ರೋಡ್ನ ತಾಲೂಕು ಕಚೇರಿಯ ಎದುರು ಹಿಂದೂ ಹಿತರಕ್ಷಣಾ ವೇದಿಕೆ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ ಬೃಹತ್ ಪ್ರತಿಭಟನೆಗೆ ಭಾರತೀಯ ಜನತಾ ಪಾರ್ಟಿ ದ.ಕ. ಜಿಲ್ಲಾ ಸಮಿತಿಯು ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದೆ.
ಪ್ರತಿಭಟನೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಸಂಸದೆ ಕು. ಶೋಭಾ ಕರಂದ್ಲಾಜೆ, ಕಾರ್ಕಳ ಶಾಸಕ ಸುನೀಲ್ ಕುಮಾರ್, ದ. ಕ. ಬಿಜೆಪಿ ಜಿಲ್ಲಾಧ್ಯಕ್ಷರಾದ ಸಂಜೀವ ಮಠಂದೂರು, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಬ್ರಿಜೇಶ್ ಚೌಟ, ರಾಜೇಶ್ ನಾಯ್ಕ್, ಸುಲೋಚನಾ ಭಟ್, ಜಗದೀಶ್ ಶೇಣವ ಸೇರಿದಂತೆ ಬಿಜೆಪಿ ಮತ್ತು ಹಿಂದೂ ಸಂಘಟನೆಯ ಪ್ರಮುಖರು ಮತ್ತು ಬೃಹತ್ ಸಂಖ್ಯೆಯಲ್ಲಿ ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.