ಮಂಗಳೂರು : ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಭಾರತೀಯ ಜನತಾ ಪಾರ್ಟಿಯ ಕಛೇರಿಯಲ್ಲಿ 70 ನೇ ಸ್ವಾತಂತ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮಾಜಿ ವಿಧಾನಪರಿಷತ್ ಸದಸ್ಯರಾದ ಮೊನಪ್ಪ ಭಂಡಾರಿಯವರು ಧ್ವಜಾರೋಹಣವನ್ನು ನೇರವೇರಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕರಾದ ಕ್ಯಾ.ಗಣೇಶ್ ಕಾರ್ಣಿಕ್, ಮಾಜಿ ಸಚಿವರಾದ ಕೃಷ್ಣ ಜೆ.ಪಾಲೇಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿಶಂಕರ ಮಿಜಾರ್, ನಗರ ದಕ್ಷಿಣದ ಅಧ್ಯಕ್ಷರಾದ ವೇದವ್ಯಾಸ ಕಾಮತ್ , ಉಮನಾಥ, ಗುರುಚರಣ್ ಮುಂತಾದವರು ಉಪಸ್ಥಿತರಿದ್ದರು.