Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಂಗಳೂರು ಏರ್­ಪೋರ್ಟ್ ಭದ್ರತಾ ಸಿಬ್ಬಂದಿ ಕೊರತೆ – ಸಂಸದರಿಂದ ಮನವಿ

ನವದೆಹಲಿ/ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಂದು (ಎಪ್ರಿಲ್ 11) ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವರಾದ ಕಿರಣ್ ರಿಜಿಜು ಅವರನ್ನು ಪಾರ್ಲಿಮೆಂಟ್ ಹೌಸ್­ನಲ್ಲಿ ಭೇಟಿ ಮಾಡಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಂಜೂರಾದ 226 ಸಿ.ಐ.ಎಸ್.ಎಫ್. ಭದ್ರತಾ ಸಿಬ್ಬಂದಿಗಳಲ್ಲಿ ಕೇವಲ 208 ಸಿಬ್ಬಂದಿಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಭದ್ರತಾ ಸಿಬ್ಬಂದಿಗಳ ಕೊರತೆಯನ್ನು ಎದುರಿಸುತ್ತಿದೆ. ಭದ್ರತಾ ಸಿಬ್ಬಂದಿಗಳ ಕೊರತೆಯಿಂದಾಗಿ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಆದುದರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಸಿ.ಐ.ಎಸ್.ಎಫ್ ಭದ್ರತಾ ಸಿಬ್ಬಂದಿಗಳನ್ನು ನೇಮಿಸುವಂತೆ ಕೇಂದ್ರ ಸಚಿವ ಕಿರಣ್ ರಿಜಿಜು ರವರಿಗೆ ಮನವಿ ಸಲ್ಲಿಸಿದರು.

Highslide for Wordpress Plugin