ಕೇಂದ್ರ ಸರಕಾರದಿಂದ ಸರಿಯಾದ ಸ್ವಂತ ಸೂರಿಲ್ಲದ ನಮ್ಮ ದೇಶದ ಪ್ರಜೆಗಳಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ವಸತಿ ಸೌಲಭ್ಯಗಳನ್ನು ಪೂರೈಸುವ ಕಾರ್ಯ ಭರದಿಂದ ನಡೆಯುತ್ತಿದೆ. ಆ ನಿಟ್ಟಿನಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸುವ ಕಾರ್ಯ ನಡೆಯಬೇಕಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಮಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಯೋಜನೆಯಡಿಯಲ್ಲಿ ಮನೆಗಳನ್ನು ನಿರ್ಮಿಸಿ ಕೊಡುವುದಕ್ಕಾಗಿ ಸಂಬಂಧಪಟ್ಟವರಿಗೆ ಸೂಚಿಸಲಾಯಿತು.