ದೆಹಲಿ : ಸಂಸದ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಮೀನುಗಾರಿಕಾ ರಂಗದ ಪದಾಧಿಕಾರಿಗಳ ನಿಯೋಗವು ಮಾನ್ಯ ಕೇಂದ್ರ ಕೃಷಿ ಸಚಿವರಾದ ರಾಧಾಮೋಹನ್ ಸಿಂಗ್ ಇವರ ಸೂಚನೆಯಂತೆ ಕೇಂದ್ರ ಹಣಕಾಸು ರಾಜ್ಯ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಇವರನ್ನು ಭೇಟಿಮಾಡಿ ಕೇಂದ್ರ ಸರಕಾರದಿಂದ ಮಂಗಳೂರು ಮೀನುಗಾರಿಕಾ ಬಂದರಿನ 3ನೇ ಹಂತದ ಯೋಜನೆಗೆ ಸಂಬಂಧಿಸಿದ ರೂ.32.20 ಕೋಟಿ ಅನುದಾನದ ಶೀಘ್ರ ಬಿಡುಗಡೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದರು. ಸಂಸದರ ನೇತೃತ್ವದ ನಿಯೋಗದ ಮನವಿಗೆ ಸ್ಪಂದಿಸಿದ ಸಚಿವರು ಶೀಘ್ರ ಅನುದಾನದ ಬಿಡುಗಡೆ ಮಾಡುವ ಭರವಸೆಯನ್ನು ನೀಡಿರುತ್ತಾರೆ.