Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮತಾಂಧ ವ್ಯಕ್ತಿಗಳ ವಿರುದ್ಧ ಪುತ್ತೂರಿನಲ್ಲಿ ಬೃಹತ್ ಪಾದಯಾತ್ರೆ

ತುಳುನಾಡಿನ ವೀರ ಪುರುಷರು, ದೈವಾಂಶ ಸಂಭೂತರಾದ, ಕೋಟಿ ಚೆನ್ನಯ್ಯರ ತಾಯಿ, ಮಹಾಮಾತೆ ದೇಯಿಬೈದೇತಿ ಅವರ ವಿಗ್ರಹವನ್ನು ಅವಮಾನಿಸಿ ಹಿಂದೂ ಸಮಾಜದ ಭಕ್ತರ ಭಾವನೆಗೆ ವಿರುದ್ಧವಾಗಿ ವರ್ತಿಸಿದ ಮತಾಂಧ ವ್ಯಕ್ತಿಗಳ ವಿರುದ್ಧ ಮತ್ತು ಜಿಲ್ಲೆಯ ಶಕ್ತಿಕೇಂದ್ರಗಳ ರಕ್ಷಣೆಗಾಗಿ ನಡೆಸಲು ಉದ್ದೇಶಿಸಿರುವ ಬೃಹತ್ ಪಾದಯಾತ್ರೆಗೂ ಮುನ್ನ ಸಂಸದ ನಳಿನ್ ಕುಮಾರ್ ಕಟೀಲ್ ಇವರು ದಿನಾಂಕ 10-10-2017 ರಂದು ಪುತ್ತೂರಿನಲ್ಲಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಹಾಗು ನಾರಾಯಣ ಗುರು ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿ ಬೃಹತ್ ಪಾದಯಾತ್ರೆಗೆ ಚಾಲನೆ ನೀಡಿದರು.

ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ಮಾಜಿ ಶಾಸಕ ಕೃಷ್ಣ ಜೆ. ಪಾಲೆಮಾರ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್ ಸೇರಿದಂತೆ ಹಲವರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

Puttur Paadayatre (2)

Puttur Paadayatre

Puttur Paadayatre (1)

Puttur Paadayatre (3)

Highslide for Wordpress Plugin