ಮಂಗಳೂರು : ಸಂಸದರಾದ ನಳಿನ್ ಕುಮಾರ್ ಕಟೀಲ್ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಕರ್ನಾಟಕ ರಾಜ್ಯ ರಬ್ಬರ್ ಬೆಳೆಗಾರರ ಹಿತರಕ್ಷಣಾ ವೇದಿಕೆ, ಉಜಿರೆ ಇವರನ್ನೊಳಗೊಂಡ ನಿಯೋಗವು ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದರು.
ರಾಜ್ಯದಲ್ಲಿ ರಬ್ಬರ್ ಕೃಷಿಕರ ಸಮಸ್ಯೆಗಳ ಕುರಿತು ಹಾಗೂ ರಬ್ಬರ್ ಆಮದು ಸಂಪೂರ್ಣವಾಗಿ ನಿಲ್ಲಿಸಿ ದೇಶದ ರಬ್ಬರ್ ಬೆಳೆಗಾರರಿಗೆ ಅನುಕೂಲ ಮಾಡಿ ಕೊಡುವಂತೆ ಕೋರಿ ಮನವಿ ಸಲ್ಲಿಸಿದರು.