ಮಂಗಳೂರಿನಲ್ಲಿ ದಿನಾಂಕ 23-12-2016ರಂದು ಕರ್ನಾಟಕ ಕೃಷಿ ಬೆಲೆ ಆಯೋಗ, ಬೆಂಗಳೂರು, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು, ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲೆ, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಇವರ ಆಶ್ರಯದಲ್ಲಿ, ರಾಷ್ಟ್ರೀಯ ರೈತ ದಿನಾಚರಣೆ ಹಿನ್ನಲೆಯಲ್ಲಿ ರೈತ ಆದಾಯವೃದ್ಧಿ ಮತ್ತು ಕಲ್ಯಾಣ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮೀನುಗಾರಿಕೆ ಮಹಾವಿದ್ಯಾಲಯದ ಆಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು. ಸಚಿವ ರಮಾನಾಥ ರೈ, ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕಟೀಲ್ ಮತ್ತು ಕ್ಯಾ. ಗಣೇಶ ಕಾರ್ಣಿಕ ಹಾಗೂ ಇರತ ಗಣ್ಯರು ಉಪಸ್ಥಿತರಿದ್ದರು.