ರಸ್ತೆ ಅಪಘಾತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ ಆಸ್ಪತ್ರೆಯ ಐ.ಸಿ.ಯು ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಪ್ರಕಾಶ್ ಹೆಗ್ಡೆ ಇವರನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ಶ್ರೀ ಪ್ರಕಾಶ್ ಜಾವಡೇಕರ್, ಮಾನ್ಯ ಕೇಂದ್ರ ರಸಗೊಬ್ಬರ ಖಾತೆ ಸಚಿವ ಶ್ರೀ ಅನಂತ ಕುಮಾರ್, ಬಿ.ಜೆ.ಪಿ ರಾಜ್ಯಾಧ್ಯಕ್ಷ ಶ್ರೀ ಬಿ.ಎಸ್. ಯಡಿಯೂರಪ್ಪ, ಸಂಸದ ನಳಿನ್ ಕುಮಾರ್ ಕಟೀಲ್ ಮುಂತಾದವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು ಹಾಗೂ ಬೇಗ ಗುಣಮುಖರಾಗುವಂತೆ ಹಾರೈಸಿದರು.