Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

14-4-2019 ರಂದು ವಿವಿಧೆಡೆ ನಡೆದ ಸಂಸದರ ಕಾರ್ಯಕ್ರಮಗಳು

ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ  ನಳಿನ್ ಕುಮಾರ್ ಕಟೀಲ್ ಅವರು ಉಪ್ಪಿನಂಗಡಿಯಲ್ಲಿ ಚೌಕಿದಾರ್ ಪೇಟ ತೊಟ್ಟು ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಸಚಿವ ನಾಗರಾಜ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಇಂದು ಮಂಗಳೂರು ಉತ್ತರ ಕ್ಷೇತ್ರದ ಇಡ್ಯಾದ ತಗ್ಗು ಸತ್ಯ ಜಾರಂದಾಯ ಜುಮಾದಿ ಅಣ್ಣಪ್ಪ ಪಂಜುರ್ಲಿ ದೈವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಮಂಗಳೂರು ಉತ್ತರ ಶಾಸಕ ಡಾ|| ಭರತ್ ಶೆಟ್ಟಿ, ಮಂಗಳೂರು ಮಹಾನಗರಪಾಲಿಕೆ ಸದಸ್ಯ ಹರೀಶ್, ಜಯಪ್ರಕಾಶ್ ಕೊಡಿಕಲ್, ಕಿರಣ್ ಕೊಡಿಕ್ಕಲ್ ಮೊದಲಾದವರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಇಂದು ಮಂಗಳೂರು ಉತ್ತರ ಕ್ಷೇತ್ರದ ಇಡ್ಯಾದ ಶ್ರೀ ವಿಠೋಬ ರುಕುಮಾಯಿ ಕ್ಷೇತ್ರ, ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಮಂಗಳೂರು ಉತ್ತರ ಶಾಸಕ ಡಾ|| ಭರತ್ ಶೆಟ್ಟಿ, ಮಂಗಳೂರು ಮಹಾನಗರಪಾಲಿಕೆ ಸದಸ್ಯ ಹರೀಶ್, ಜಯಪ್ರಕಾಶ್ ಕೊಡಿಕಲ್, ಕಿರಣ್ ಕೊಡಿಕ್ಕಲ್ ಮೊದಲಾದವರು ಉಪಸ್ಥಿತರಿದ್ದರು.

ಡಾ|| ಬಾಬಾಸಾಹೇಬ್ ಅಂಬೇಡ್ಕರ್ ಅವರ 128 ನೇ ಜನ್ಮ ದಿನಾಚರಣೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ 14-04-2019 ರಂದು ಆಚರಿಸಲಾಯಿತು. ಬಿಜೆಪಿ ಮಂಗಳೂರು ಲೋಕಸಭಾ ಅಭ್ಯರ್ಥಿ  ನಳಿನ್ ಕುಮಾರ್ ಕಟೀಲ್ ಇವರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗೌರವ ಸಲ್ಲಿಸಿದರು.  ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಅನ್ವರ್ ಮಾನಿಪ್ಪಾಡಿ, ವೈದ್ಯಕೀಯ ಪ್ರಕೋಷ್ಟದ ರಾಜ್ಯ ಸಹ ಸಂಚಾಲಕ ಡಾ|| ಅಣ್ಣಯ್ಯ ಕುಲಾಲ್, ರಾಜ್ಯ ಬಿಜೆಪಿ ವಕ್ತಾರ ಅನ್ವರ್ ಮಾನಿಪ್ಪಾಡಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.

ಹಿಂದೂ ಸೇವಾ ಸಮಿತಿ ಕೊಡಿಕಲ್ ಮಂಗಳೂರು ಇದರ ವತಿಯಿಂದ ಶ್ರೀ ಮಹಾಗಣಪತಿ ಭಜನಾ ಮಂದಿರದಲ್ಲಿ ನಡೆದ ರಾಮನವಮಿ ಉತ್ಸವದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಇವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ಶಾಸಕ ಡಾ|| ಭರತ್ ಶೆಟ್ಟಿ, ಮಂಗಳೂರು ಮಹಾನಗರಪಾಲಿಕೆ ಸದಸ್ಯ ಹರೀಶ್, ಜಯಪ್ರಕಾಶ್ ಕೊಡಿಕಲ್, ಕಿರಣ್ ಕೊಡಿಕ್ಕಲ್ ಮೊದಲಾದವರು ಉಪಸ್ಥಿತರಿದ್ದರು.

Highslide for Wordpress Plugin