Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

15-4-2019 ರಂದು ವಿವಿಧೆಡೆ ನಡೆದ ಸಂಸದರ ಕಾರ್ಯಕ್ರಮಗಳು

ಭಾರತೀಯ ಜನತಾ ಪಾರ್ಟಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವತಿಯಿಂದ ನಡೆದ ಬೃಹತ್ ರೋಡ್ ಶೋ ಹಾಗೂ ಮತಯಾಚನೆ. ಕೇಂದ್ರ ಸಚಿವ ಸುರೇಶ್ ಪ್ರಭು, ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್, ಮಂಗಳೂರು ಉತ್ತರ ಶಾಸಕ ಡಾ|| ಭರತ್ ಶೆಟ್ಟಿ ಹಾಗೂ ಅನೇಕ ನಾಯಕರು ಹಾಗೂ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಇಂದು ಮೂಡಬಿದರೆಯಲ್ಲಿ ಚೌಕಿದಾರ್ ಪೇಟ ತೊಟ್ಟು ಬೃಹತ್ ರೋಡ್ ಶೋ ನಡೆಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಉಮಾನಾಥ ಕೋಟ್ಯಾನ್, ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷರಾದ ರವಿಶಂಕರ್ ಮಿಜಾರ್, ಮುಲ್ಕಿ ಮೂಡಬಿದ್ರೆ ಬಿಜೆಪಿ ಮಂಡಲ ಅಧ್ಯಕ್ಷರಾದ ಈಶ್ವರ್ ಕಟೀಲ್, ಕಸ್ತೂರಿ ಪಂಜ, ದೇವಪ್ರಸಾದ್ ಪುನರೂರು,ಜಗದೀಶ್ ಅಧಿಕಾರಿ, ಸುದರ್ಶನ್ ಮೂಡಬಿದ್ರೆ, ಸುಕೇಶ್ ಮೂಡಬಿದ್ರೆ, ಅಭಿರಾಮ ಉಡುಪರು, ಬ್ರಿಜೇಶ್ ಚೌಟ, ಬಾಹುಬಲಿ ಪ್ರಸಾದ್, ವಿನೋದ್ ಹಳೆಯಂಗಡಿ, ಸುನಿಲ್ ಮುಲ್ಕಿ, ಪಕ್ಷದ ಪ್ರಮುಖರು ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

ನಗರದ ಓಷನ್ ಪರ್ಲ್ ಹೋಟೆಲಿನಲ್ಲಿ ಇಂದು ಮಾನ್ಯ ಕೇಂದ್ರ ಸಚಿವರಾದ ಶ್ರೀ ಸುರೇಶ್ ಪ್ರಭು ಅವರು ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷ ಶ್ರೀ ರವಿಶಂಕರ್ ಮಿಜಾರ್, ಮಂಗಳೂರು ದಕ್ಷಿಣ ಶಾಸಕ ಶ್ರೀ ವೇದವ್ಯಾಸ ಕಾಮತ್, ಪುತ್ತೂರು ಶಾಸಕ ಶ್ರೀ ಸಂಜೀವ ಮಠಂದೂರು, ಮಾಜಿ ಶಾಸಕ ಶ್ರೀ ಯೋಗೀಶ್ ಭಟ್ ಉಪಸ್ಥಿತರಿದ್ದರು.

ಇಂದು ಪುತ್ತೂರಿನಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಕೇಂದ್ರ ಸಚಿವ ಸುರೇಶ್ ಪ್ರಭು ಅವರು ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಶ್ರೀ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಬಿಜೆಪಿ ಉಪಾಧ್ಯಕ್ಷ ಶ್ರೀ ರವಿಶಂಕರ್ ಮಿಜಾರ್, ಶಾಸಕ ಸಂಜೀವ ಮಠಂದೂರು, ಗೋಪಾಲಕೃಷ್ಣ ಹೇರಳೆ, ಚನೀಲ ತಿಮ್ಮಪ್ಪ ಶೆಟ್ಟಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಸುಳ್ಯ ತಾಲೂಕು ಹಿರಿಯ ಬಿಜೆಪಿ ನಾಯಕ ಎನ್.ಎ.ಸುಂದರರವರು ನಿನ್ನೆ ರಾತ್ರಿ ನಿಧನರಾಗಿದ್ದು ಅವರ ಪಾರ್ಥಿವ ಶರೀರವನ್ನು ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ವಠಾರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸುಳ್ಯದ ಬಿಜೆಪಿ ಕಛೇರಿಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಮುಗಿದ ಬಳಿಕ ಕಟೀಲ್ ಮತ್ತು ಇತರ ನಾಯಕರು, ಕಾರ್ಯಕರ್ತರು ಯುವಜನ ಸಂಯುಕ್ತ ಮಂಡಳಿಯ ವಠಾರಕ್ಕೆ ಹೋಗಿ ಎನ್.ಎ.ಸುಂದರರ ಅಂತಿಮ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶಾಸಕ ಎಸ್ . ಅಂಗಾರ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್,ಬಿ ಜೆ ಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ತಾ.ಪಂ ಅಧ್ಯಕ್ಷ ಚನಿಯ ಕಲ್ತಡ್ಕ, ಬಿಜೆಪಿ ಮುಖಂಡರಾದ ಎ.ವಿ .ತೀರ್ಥರಾಮ, ಮಹೇಶ್ ರೈ ಮೇನಾಲ, ವಿನಯ ಮುಳುಗಾಡು, ನವೀನ್ ರೈ, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಪುತ್ತೂರು ಮುಳಿಯ ಜುವೆಲ್ಲರಿ ಇದರ ಮಾಲಕರಾದ ಮುಳಿಯ ಕೇಶವ್ ಭಟ್ ಇವರ ಮನೆಗೆ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಮತ ಯಾಚಿಸಿದರು. ಈ ಸಂದರ್ಭದಲ್ಲಿ ಪುತ್ತೂರಿನ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಚುನಾವಣಾ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ನಗರ ಬಿಜೆಪಿ ಅಧ್ಯಕ್ಷ ಜೀವಂದರ್ ಜೈನ್, ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮುಳಿಯ ಕೇಶವ ಪ್ರಸಾದ್ ಅವರ ಮಗಳು ರಚಿಸಿದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜಿ ಅವರ ಚಿತ್ರವನ್ನು ನಳಿನ್ ಕುಮಾರ್ ಕಟೀಲ್ ಇವರು ಪ್ರಶಂಸೆ ವ್ಯಕ್ತ ಪಡಿಸಿದರು.

ದಿನಾಂಕ 14-4-2019 ರಂದು ಬಜ್ಪೆ ಕರಂಬಾರ್ ಎಂಬಲ್ಲಿ ರಾತ್ರಿ ಮನೆಯ ಮೇಲಿನಿಂದ ಬಿದ್ದ ಪರಿಣಾಮವಾಗಿ ದೀಕ್ಷಿತ್ ರಾಜ್ ಎಂಬ ಯುವಕ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ರೀ ನಳಿನ್ ಕುಮಾರ್ ಕಟೀಲ್, ಶಾಸಕ ಶ್ರೀ ಉಮನಾಥ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀ ರವಿಶಂಕರ್ ಮಿಜಾರ್ ಮೊದಲಾದವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಪಾರ್ಥಿವ ಶರೀರವನ್ನು ವೀಕ್ಷಿಸಿ ನಮನ ಸಲ್ಲಿಸಿದರು.

Highslide for Wordpress Plugin