ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಹಿನ್ನಲೆಯಲ್ಲಿ ಪಿಎಫ್ಐ, ಕೆಎಫ್ಡಿ ಹಾಗೂ ಎನ್ಡಿಎಫ್ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ದೆಹಲಿಯಲ್ಲಿ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಕಟೀಲ್, ಕೇರಳದ ಕಾಸರಗೋಡಿನಲ್ಲಿ ಈ ಸಂಘಟನೆಗಳು ಬಲಗೊಳ್ಳುತ್ತಿದ್ದು, ಹಿಂದೂ ಸಂಘಟನೆಗಳನ್ನು ಗುರಿಯಾಗಿಸಿ ದಾಳಿ ಮಾಡುತ್ತಿವೆ. ಕರ್ನಾಟಕದಲ್ಲಿ ಆರ್.ಎಸ್.ಎಸ್ ಹಾಗು ಬಿಜೆಪಿ ಕಾರ್ಯಕರ್ತರ ಮೇಲಿನ ದಾಳಿ, ಹತ್ಯೆ ಪ್ರಕರಣಗಳು ದಿನೇ ದಿನೆ ಹೆಚ್ಚಾಗುತ್ತಿವೆ. ಸಮಾಜ ವಿರೋಧಿ ಸಂಘಟನೆಗಳಿಗೆ ಮುಸ್ಲಿಂ ಲೀಗ್ ರಾಜಕೀಯ ರಕ್ಷಣೆ ನೀಡುತ್ತಿದೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ. ಕರಾವಳಿಯಲ್ಲಿ ಹಿಂದು ಸಂಘಟನೆ ಕಾರ್ಯಕರ್ತರ ಹತ್ಯೆ ಬಗ್ಗೆ ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸುವಂತೆಯೂ ಅವರು ಆಗ್ರಹಿಸಿದ್ದಾರೆ.