ಮಂಗಳೂರು : ದ್ವೇಷದ ರಾಜಕಾರಣ, ಭ್ರಷ್ಟಾಚಾರ, ಅಧಿಕಾರಿಗಳ ಮೇಲೆ ಒತ್ತಡ, ಬಹುಸಂಖ್ಯಾತ ವಿರೋಧಿ ನೀತಿ ಹಾಗೂ ಕೋಮು ಸಂಘರ್ಷಕ್ಕೆ ಪ್ರಚೋದಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಮಂಗಳೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಬೃಹತ್ ಪ್ರತಿಭಟನಾ ಸಭೆ ದಿನಾಂಕ 23-08-2017 ರಂದು ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್, ದ.ಕ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು, ಪದ್ಮನಾಭ ಕೊಟ್ಟಾರಿ, ಶ್ರೀಮತಿ ಸುಲೋಚನಾ ಭಟ್, ಯೋಗೀಶ್ ಭಟ್, ವಾಸುದೇವ ಕಾಮತ್, ಕ್ಯಾಪ್ಟನ್ ಬ್ರಿಜೇಶ್ ಚೌಟ, ನಾಗರಾಜ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.