ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗೋಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಜಿಲ್ಲೆಯ ಕೃಷಿ ಮತ್ತು ಹೈನುಗಾರಿಕೆಯ ಜೊತೆಗೆ ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತಿದ್ದು ಇದನ್ನು ನಿಲ್ಲಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೂಡ ಉಪಸ್ಥಿತರಿದ್ದರು. ಮನವಿಯಲ್ಲಿ ಜಿಲ್ಲಾಡಳಿತ ತಕ್ಷಣ ತೆಗೆದುಕೊಳ್ಳಬೇಕಾದ ಇಪ್ಪತ್ತು ಬೇಡಿಕೆಗಳನ್ನು ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಲಾಯಿತು.
ಭಾರತೀಯ ಜನತಾ ಪಾರ್ಟಿಯ ನಿಯೋಗದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲ್, ಕು. ಶೋಭಾ ಕರಂದ್ಲಾಜೆ, ಶಾಸಕರಾದ ಅಂಗಾರ, ಸಂಜೀವ ಮಠಂದೂರು, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ , ವಿವಿಧ ಹಿಂದೂ ಸಂಘಟನೆಗಳ ಪದಾಧಿಕಾರಿಗಳಾದ ಶರಣ್ ಪಂಪ್ವೆಲ್, ಜಗದೀಶ್ ಶೇಣವ ಹಾಗೂ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡದ ಪಧಾದಿಕಾರಿಗಳು ಭಾಗವಹಿಸಿದ್ದರು.