ಭಾರತೀಯ ಜನತಾ ಪಾರ್ಟಿ ಸಂಘಟನಾ ಪರ್ವ ಸದಸ್ಯತಾ ಅಭಿಯಾನ 2019 ಇದಕ್ಕೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಚಾಲನೆ ನೀಡಲಾಯಿತು. ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಕುಮಾರಿ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ಸಂಜೀವ ಮಠಂದೂರು, ಎಸ್. ಅಂಗಾರ, ರಾಜೇಶ್ ನಾಯಕ್ ಉಳಿಪಾಡಿಗುತ್ತು, ಉಮಾನಾಥ ಕೋಟ್ಯಾನ್, ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಹರೀಶ್ ಪೂಂಜಾ ಹಾಗೂ ಮೊದಲಾದ ನಾಯಕರು ಉಪಸ್ಥಿತರಿದ್ದರು.