ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಭಿವೃದ್ಧಿ ಕುರಿತು ಇಲಾಖಾಧಿಕಾರಿಗಳೊಂದಿಗೆ ಸಭೆ ಇಂದು (ಸೆ. 20) ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.
ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ಸಂಸದರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್, ದ.ಕ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ಜಿಲ್ಲಾಧಿಕಾರಿಗಳಾದ ಸಿಂಧು ಬಿ ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ, ಮುಲ್ಕಿ ಮೂಡಬಿದ್ರೆ ಶಾಸಕ ಶ್ರೀ ಉಮಾನಾಥ್ ಕೋಟ್ಯಾನ್, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಶ್ವರರಾದ ಶ್ರೀ ವಾಸುದೇವ ಅಸ್ರಣ್ಣ, ಹರಿನಾರಾಯಣ ಅಸ್ರಣ್ಣ, ಲಕ್ಷ್ಮೀನಾರಾಯಣ ಅಸ್ರಣ್ಣ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.