ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಉಡುಪಿ-ಚಿಕ್ಕಮಗಳೂರು ಸಂಸದೆ ಕು. ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವರಾದ ರಾಜನಾಥ್ ಸಿಂಗ್ ಇವರನ್ನು ಪಾರ್ಲಿಮೆಂಟ್ ಹೌಸ್ನಲ್ಲಿ ಭೇಟಿಯಾಗಿ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ಸಚಿವರನ್ನು ಆಗ್ರಹಿಸಿದರು. ಕರಾವಳಿ ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಗೃಹ ಸಚಿವರು ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಭರವಸೆ ನೀಡಿದರು ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.