Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಬಿ.ಸಿ.ರೋಡಿನ ನಗರದ ಸುಂದರೀಕರಣ ಯೋಜನೆಗೆ ಚಾಲನೆ

ಬಿ.ಸಿ.ರೋಡಿನ ನಗರದ ಸುಂದರೀಕರಣ ಯೋಜನೆಗೆ ಇಂದು ಚಾಲನೆ ನೀಡಲಾಯಿತು ಇದರೊಂದಿಗೆ ಫಲಾನುಭವಿಗಳಿಗೆ 94 ಸಿ – 94 ಸಿಸಿ ಹಕ್ಕುಪತ್ರ ವಿತರಣೆಯ ಕಾರ್ಯಕ್ರಮವು ಬಿ.ಸಿ ರೋಡ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಮಾನ್ಯ ಕಂದಾಯ, ಪೌರಾಡಳಿತ ಸಚಿವರಾದ ಶ್ರೀ ಆರ್. ಅಶೋಕ್, ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀ ಸಂಜೀವ ಮಠಂದೂರು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಶಾಸಕ ಶ್ರೀ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಶಾಸಕ ಶ್ರೀ ವೇದವ್ಯಾಸ್ ಕಾಮತ್ ಹಾಗೂ ಇನ್ನಿತರ ಪ್ರಮುಖರು ಭಾಗವಹಿಸಿದರು.

Highslide for Wordpress Plugin