ಸುಳ್ಯ: ಬಿಜೆಪಿಯ ನೇತೃತ್ವದಲ್ಲಿ ನಡೆಸಿದ ನಿರಂತರ ಹೋರಾಟದ ಫಲವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೊಳೆ ರೋಗ ಬಂದು ಅಡಕೆ ಕೃಷಿ ನಶಿಸಿದ ಕೃಷಿಕರಿಗೆ ಪರಿಹಾರ ಧನ ಘೋಷಣೆ ಮಾಡಿದೆ. ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ. ಅವರು ಜಾಲ್ಸೂರು ಶಕ್ತಿ ಕೇಂದ್ರದ ವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಬಿಜೆಪಿಯ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ 175 ಕೋಟಿ ಮತ್ತು ರಾಜ್ಯ ಸರ್ಕಾರ ದಕ ಇಲ್ಲೆಗೆ 20 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಅದುದರಿಂದ 29 ಕ್ಕೆ ಪುತ್ತೂರಿನಲ್ಲಿ ಹಮ್ಮಿಕೊಂಡಿದ್ದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ. ಪರಿಹಾರ ಸಮರ್ಪಕವಾಗಿ ರೈತರಿಗೆ ತಲುಪದಿದ್ದರೆ ಮತ್ತೆ ಹೋರಾಟ ನಡೆಸುವುದಾಗಿ ಅವರು ಹೇಳಿದರು.
ನರೇಂದ್ರ ಮೋದಿ ಅಲೆ ದೇಶದೆಲ್ಲಡೆ ಹರಡಿದೆ ಎಂದ ಅವರು ದೇಶದಲ್ಲಿ ಆರ್ಥಿಕ ಪರಿಸ್ಥಿತಿ, ಆಂತರಿಕ ಭದ್ರತೆ ಕುಸಿದಿದೆ. ಪಾಕಿಸ್ಥಾನ ಹಲವು ಬಾರಿ ನಮ್ಮ ಮೇಲೆ ಆಕ್ರಮಣ ಮಾಡುತ್ತಾ ಇದ್ದರೂ ಅದಕ್ಕೆ ತಕ್ಕ ಉತ್ತರ ನೀಡಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಅವರು ದೂರಿದರು.
ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಜೇಷ್ಠ ಪಡಿವಾಳ್, ಜಿಲ್ಲಾ ಉಪಾಧ್ಯಕ್ಷ ಎ.ವಿ.ತೀರ್ಥರಾಮ, ಪ್ರಧಾನ ಕಾರ್ಯದರ್ಶಿ ಸಂಜೀವ ಮಠಂದೂರು, ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಮುಳಿಯ ಕೇಶವ ಭಟ್, ರಾಕೇಶ್ ರೈ ಕೆಡಿಂಜಿ, ಜಿ.ಪಂ.ಸದಸ್ಯ ತಾಲೂಕು ಪಂಚಾಯಿತಿ ಅಧ್ಯಕ್ಷೆ ಗುಣವತಿ ಕೊಲ್ಲಂತ್ತಡ್ಕ, ಜಾಲ್ಸೂರು ಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ ಅಡ್ಪಂಗಾಯ, ಗ್ರಾ.ಪಂ.ಅಧ್ಯಕ್ಷ ಭಾಸ್ಕರ ಗೌಡ, ಸತೀಶ್, ಸನತ್ ಅಡ್ಕಾರ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.