ಪುತ್ತೂರು: ಜಿಲ್ಲೆಯಲ್ಲಿ ನಕ್ಸಲ್ ಚಟುವಟಿಕೆ ವಿರುದ್ಧ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಅನಗತ್ಯ ಮಸೂದೆ ಮಂಡನೆ ಮಾಡುವುದರಲ್ಲೇ ಕಾಲ ಕಳೆಯುತ್ತಿರುವ ಸರಕಾರ ನಕ್ಸಲ್ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಪುತ್ತೂರಿನಲ್ಲಿ ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಬೆಳ್ತಂಗಡಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಕ್ಸಲ್ ಚಟುವಟಿಕೆ ಕಂಡುಬಂದಿದೆ. ಹೀಗಿದ್ದರೂ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಮನೆಗೇ ಬಂದು ದಾಳಿ ನಡೆಸಿದ ನಕ್ಸಲರು ಸರಕಾರಕ್ಕೇ ಸವಾಲು ಹಾಕಿದ್ದಾರೆ. ಹೀಗಾಗಿ ಸೂಕ್ತ ಕ್ರಮ ಕ್ಯಗೊಳ್ಳಬೇಕು ಎಂದು ನಳಿನ್ ಒತ್ತಾಯಿಸಿದರು.