Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಅ. 20 : ಮಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ರಾಜ್ಯಾಧ್ಯಕ್ಷರು

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ಶತಮಾನೋತ್ಸವ ಮತ್ತು ಶತಮಾನೋತ್ಸವ ಸಹಕಾರಿ ಸೌಧ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರೂ ಹಾಗೂ ಶಾಸಕರಾದ ಶ್ರೀ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಭಾರತೀಯ ಜನತಾ ಪಾರ್ಟಿ ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಹಾಗೂ ಮುಜರಾಯಿ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರು ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮುಲ್ಕಿ-ಮೂಡಬಿದ್ರೆ ಮಂಡಲ ವತಿಯಿಂದ ಅಭಿನಂದನಾ ಕಾರ್ಯಕ್ರಮ ಇಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಮೂಡಬಿದರೆ ಇಲ್ಲಿ ನಡೆಯಿತು. ಈ ಸಂದರ್ಭ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರೂ ಹಾಗೂ ಪುತ್ತೂರು ಶಾಸಕರೂ ಆದ ಶ್ರೀ ಸಂಜೀವ ಮಠಂದೂರು, ಮುಲ್ಕಿ-ಮೂಡಬಿದ್ರೆ ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ, ಮುಲ್ಕಿ-ಮೂಡಬಿದ್ರೆ ಮಂಡಲಾಧ್ಯಕ್ಷರಾದ ಶ್ರೀ ಈಶ್ವರ ಕಟೀಲ್, ಇತರ ನಾಯಕರು ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Highslide for Wordpress Plugin