ಮಂಗಳೂರಿನ ಪುರಭವನದಲ್ಲಿ ನಡೆಯುತ್ತಿರುವ ಕೇಂದ್ರ ಸರಕಾರದ ವಿವಿಧ ಹಣಕಾಸು ಯೋಜನೆಗಳ ಅನುಷ್ಠಾನಗೊಳಿಸುವ ಸಲುವಾಗಿ ಏರ್ಪಡಿಸಿದ್ದ ಎರಡು ದಿನಗಳ ಗ್ರಾಹಕ ಸಂಪರ್ಕ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ಶ್ರೀ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಿದರು.
ಉಳ್ಳಾಲದ ಐತಿಹಾಸಿಕ ಪುಣ್ಯ ಕ್ಷೇತ್ರ, ಚೀರುಂಭ ಭಗವತಿ ದೇವಸ್ಶಾನಕ್ಕೆ ಬಿಜೆಪಿ ರಾಜ್ಯಾದ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರವರು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ್ ಉಚ್ಚಿಲ್ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.
ಕೊಲ್ಯ ಶ್ರೀ ಸಾರ್ವಜನಿಕ ಶಾರದೊತ್ಸವ ಸಮಿತಿ ಇದರ ವತಿಯಿಂದ ನಡೆಯುವ ಶಾರದ ಮಹೋತ್ಸವಕ್ಕೆ ಕರ್ನಾಟಕ ರಾಜ್ಯ ಬಿ.ಜೆ.ಪಿ. ಅದ್ಯಕ್ಷರು ಮತ್ತು ನಮ್ಮ ನೆಚ್ಚಿನ ಸಂಸದರಾದ ನಳೀನ್ ಕುಮಾರ್ ಕಟೀಲ್ ರವರು ಬೇಟಿ ನೀಡಿ ಶಾರದ ಮಾತೆಯ ಪೂಜೆಯಲ್ಲಿ ಪಾಲ್ಗೊಂಡು ಮಾತೆಯ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂತೋಷ್ ಕುಮಾರ್ ಬೋಳಿಯರ್, ಸೀತರಾಮ್ ಬಂಗೇರ, ಚಂದ್ರಶೇಖರ್ ಉಚ್ಚಿಲ್, ಚಂದ್ರಹಾಸ್ ಪಂಡಿತಹೌಸ್ ಇದ್ದರು.