ಪುತ್ತೂರು: ರಾಷ್ಟ್ರೀಯ ಹಿತದ ಆಧಾರದಲ್ಲಿ ಕೆಲಸ ಮಾಡುವ ಬಿಜೆಪಿಗೆ ಕಾರ್ಯಕರ್ತರೇ ನಿಜವಾದ ಆಸ್ತಿ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.ಅವರು ಶುಕ್ರವಾರದಂದು ಪುತ್ತೂರಿನ ಪಡ್ನೂರು 3ನೇ ವಾರ್ಡ್ ಪಡ್ಡಾಯೂರಿಗೆ ಬೇಟಿ ನೀಡಿದ ಬಳಿಕ ಪುತ್ತೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಕಳೆದ 5 ವರ್ಷಗಳಲ್ಲಿ ಬಿಜೆಪಿ ಸರಕಾರ ಉತ್ತಮ ಆಡಳಿತ ನಡೆಸಿ ಅಭಿವೃದ್ದಿ ಕಾರ್ಯಗಳನ್ನು ಮಾಡಿದೆ. ಆದರೆ ಬಳಿಕ ವಿವಿಧ ಕಾರಣಗಳಿಂದ ಚುನಾವೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾದರೂ ಕಾರ್ಯಕರ್ತರು ಎದೆಗುಂದ ಬೇಕಾಗಿಲ್ಲ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕಿ ಮಲ್ಲಿಕಾ ಪ್ರಸಾದ್,ಕ್ಷೇತ್ರ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಹೇರಳೆ, ಪುರಸಭಾ ಸದಸ್ಯರಾದ ರಾಜೇಶ್ ಬನ್ನೂರು, ಹರೀಶ್ ನಾಯ್ಕ್, ಯಶೋದ ಬಿರಾವ್, ಬಿಜೆಪಿ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ರಾಜೀವ ಭಂಡಾರಿ, ಕಾರ್ಯದರ್ಶಿ ಜಯರಾಮ ಪೂಜಾರಿ, ರೈತ ಮೋರ್ಛಾದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮೊದಲಾದವರು ಉಪಸ್ಥಿತರಿದ್ದರು.