Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಹೆದ್ದಾರಿಗಳ ಸಮಸ್ಯೆಗಳ ಕುರಿತು ವಿಶೇಷ ಸಭೆ

ನವದೆಹಲಿ : ಸಂಸದ  ನಳಿನ್ ಕುಮಾರ್ ಕಟೀಲ್ ಇವರ ಮನವಿಯ ಮೇರೆಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳ ಸಮಸ್ಯೆಗಳ ಕುರಿತು ವಿಶೇಷ ಸಭೆಯು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.

ರಾಷ್ಟ್ರೀಯ ಹೆದ್ದಾರಿ-77ರಲ್ಲಿ ಬಿ.ಸಿ ರೋಡ್ ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಮಗಾರಿಯು L&T ಕಂಪನಿಯಿಂದ ಮಂದಗತಿಯಲ್ಲಿ ನಡೆಯುತ್ತಿರುವ ಬಗ್ಗೆ ಸಂಸದರ ಮನವಿಯನ್ನು ಪರಿಗಣಿಸಿದ ಸಚಿವರು L&T ಕಂಪನಿ ಹಾಗೂ ಎನ್.ಎಚ್.ಎ.ಐ ಅಧಿಕಾರಿಗಳಿಗೆ ಕಾಮಗಾರಿಯನ್ನು ಕಾನೂನು ಸಮಸ್ಯೆಗಳನ್ನು ಪರಿಹರಿಸಿ ತ್ವರಿತಗತಿಯಲ್ಲಿ ಮುಂದುವರೆಸುವಂತೆ ಆದೇಶಿಸಿದರು.

Highway Meeting

ತಲಪಾಡಿ – ಕುಂದಾಪುರ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಕಿ ಕಾಮಗಾರಿ ಹಾಗೂ ತೊಕ್ಕೊಟ್ಟು ಮತ್ತು ಪಂಪವೆಲ್ ಮೇಲ್ಸೇತುವೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಫೆಬ್ರವರಿ ಅಂತ್ಯದೊಳಗೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ನವಯುಗ ಸಂಸ್ಥೆಗೆ ಸಚಿವರ ಖಡಕ್ ಸೂಚನೆ ನೀಡಿದರು.

ಕುಲಶೇಖರ – ಕಾರ್ಕಳ, ಬಿ.ಸಿ.ರೋಡ್ – ಕಟೀಲು – ಮೂಲ್ಕಿ ಹಾಗೂ ಮೇಲ್ಕಾರು – ಕೊಣಾಜೆ – ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭೂಸ್ವಾಧೀನ ಪ್ರಕ್ರಿಯೆಗೆ ವೇಗ ನೀಡುವಂತೆ ರಾಜ್ಯದ ಅಧಿಕಾರಿಗಳಿಗೆ ಸೂಚಿಸಿದರು. ಫೆಬ್ರವರಿ ಅಂತ್ಯದೊಳಗೆ ಈ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸ ಮತ್ತು ತಲಪಾಡಿ – ಕುಂದಾಪುರ ರಸ್ತೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಾಗಿ ಅಧಿಕಾರಿಗಳಿಗೆ ತಿಳಿಸಿದರು.

ಈ ಸಭೆಯಲ್ಲಿ ಕೇಂದ್ರ ಸಚಿವರಾದ ಡಿ.ವಿ ಸದಾನಂದ ಗೌಡ, ಸಂಸದ ನಳಿನ್ ಕುಮಾರ್ ಕಟೀಲ್ ಜಿಲ್ಲೆಯ ಸಮಸ್ಯೆಗಳನ್ನು ಸಚಿವರಿಗೆ ವಿವರಿಸಿದರು. ರಾ.ಹೆ ಸಿ.ಜಿ.ಮ್ ಅಲೋಕ್ ದೀಪಾಂಕರ್ ಬೆಂಗಳೂರು ಆರ್.ಓ ಆರ್.ಸಿ ಸೂರ್ಯವಂಶಿ, ಸಚಿವರ ಕಾರ್ಯದರ್ಶಿ ವೈಭವ್ ದಾಂಘೆ, ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Highslide for Wordpress Plugin