ಬೆಳ್ಳಾರೆ ಗ್ರಾಮ ಪಂಚಾಯಿತಿಯ ಘನತ್ಯಾಜ್ಯ ವಿಲೇವಾರಿ ಘಟಕವನ್ನು ಸಂಸದ ನಳಿನ್ಕುಮಾರ್ ಕಟೀಲ್ ಉದ್ಘಾಟಿಸಿದರು.
ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಮಂಡಳಿ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ತಾಲೂಕು ಪಂಚಾಯಿತಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ತಾ.ಪಂ. ಸದಸ್ಯ ಅನಿಲ್ ರೈ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಬಿ.ವಿ.ಮಲ್ಲೇಶಪ್ಪ, ಸುಳ್ಯ ತಾಲೂಕು ಮಹಿಳಾ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ರಾಜೀವಿ ಆರ್.ರೈ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕರುಣಾಕರ ಆಳ್ವ, ಸುಳ್ಯದ ವಕೀಲ ಎಂ.ವೆಂಕಪ್ಪ ಗೌಡ, ಜಿ.ಪಂ.ಮಾಜಿ ಸದಸ್ಯ ಚಂದ್ರಶೇಖರ ಕಾಮತ್, ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷ ಎನ್.ಎಸ್.ಡಿ.ವಿಠಲ್ದಾಸ್, ಉಪಾಧ್ಯಕ್ಷೆ ಬೀಬಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚೆನ್ನಪ್ಪ ಗೌಡ ಕಜೆಮೂಲೆ ಸ್ವಾಗತಿಸಿ ಗ್ರಾ.ಪಂ.ಅಧ್ಯಕ್ಷ ಎನ್.ಎಸ್.ಡಿ.ವಿಠಲ್ದಾಸ್ ಪ್ರಸ್ತಾವನೆಗೈದರು. ಗ್ರಾ.ಪಂ.ಸದಸ್ಯ ಅನಂದ ಬೆಳ್ಳಾರೆ ವಂದಿಸಿದರು.
ಕಾರ್ಯಕ್ರಮಕ್ಕೆ ಮುನ್ನ ಆಕರ್ಷಕ ಮೆರವಣಿಗೆ ನಡೆಯಿತು. ಸಂಸದ ನಳಿನ್ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡಿದರು.