ಸುಳ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಸುಳ್ಯ, ಅಖಿಲ ಕರ್ನಾಟಕ ರಾಜ್ಯ ಜನಜಾಗೃತಿ ವೇದಿಕೆ, ಬೆಳ್ತಂಗಡಿ, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಸುಳ್ಯ, ನಗರ ಪಂಚಾಯತ್ ಸುಳ್ಯ, ಜನಜಾಗೃತಿ ವೇದಿಕೆ ಸುಳ್ಯ ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ಪರಮಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ 1000 ನೇ ಮದ್ಯವರ್ಜನ ಶಿಬಿರವನ್ನು ದಿನಾಂಕ 24-09-2016 ರಿಂದ 30-09-2016 ರವರೆಗೆ ಸುಳ್ಯದ ಪುರಭವನದಲ್ಲಿ ಏರ್ಪಡಿಸಲಾಗಿದೆ. ಈ ಸಂದರ್ಭ ನಡೆದ ಕಾರ್ಯಕ್ರಮದಲ್ಲಿ ದಿನಾಂಕ 27-9-2016 ರಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಿದ್ದರು.