Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಹಿಂದು ದಮನ ನೀತಿ ಮುಂದುವರಿಸಿದರೆ ಜನತೆ ಸೂಕ್ತ ಉತ್ತರ ನೀಡಲಿದ್ದಾರೆ

Nalin-Kumar-Kateelಮಂಗಳೂರು : ಉಳಾಯಿಬೆಟ್ಟು ಪ್ರದೇಶದಲ್ಲಿ ದತ್ತ ಮಾಲಾಧಾರಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಬೇಕೆಂದು ಸಂಸದ ನಳಿನ್‌ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕಾಂಗ್ರೆಸ್ ಜನಪ್ರತಿನಿಧಿಗಳ ಪಕ್ಷಪಾತ ಧೋರಣೆಯಿಂದಾಗಿ ಆಗಾಗ ಗಲಭೆ ಸೃಷ್ಟಿಯಾಗುತ್ತಿದೆ.

ಉಳಾಯಿಬೆಟ್ಟುವಿನಲ್ಲಿ ಮನೆಗಳಿಗೆ ನುಗ್ಗಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿದವರನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ. ಶಾಂತಿ ಕದಡುವ ದುಷ್ಕರ್ಮಿಗಳ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಖಂಡನೀಯ. ಸರ್ಕಾರ ಹಿಂದು ದಮನ ನೀತಿ ಮುಂದುವರಿಸಿದರೆ ಜನತೆ ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Highslide for Wordpress Plugin