ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸಭೆ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ನಡೆಯಿತು.
ಸಂಸದ ನಳಿನ್ ಕುಮಾರ್ ಉದ್ಘಾಟಿಸಿ ಮಾತನಾಡಿ, ಭಾರತೀಯ ಜನತಾ ಪಾರ್ಟಿಯ ಮೋರ್ಚಾಗಳಲ್ಲಿ ಯುವಮೋರ್ಚಾ ಬಲಿಷ್ಠವಾಗಿದೆ. ಪ್ರತಿಯೊಬ್ಬ ಜವಾಬ್ದಾರಿಯುತ ಯುವಮೋರ್ಚಾ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ವಿವಿಧ ಯೋಜನೆಗಳನ್ನು ಜನರಿಗೆ ತಲುಪಿಸುವಂತೆ ಶಕ್ತಿ ಮೀರಿ ಕೆಲಸ ಮಾಡಬೇಕು ಎಂದರು.
ಮಂಗಳೂರಿಗೆ ಸ್ಮಾರ್ಟ್‌ಸಿಟಿ ಮತ್ತು ಅಮೃತ್ ಯೋಜನೆ ತರಲು ನೇತೃತ್ವ ವಹಿಸಿದ ಸಂಸದ ನಳಿನ್ ಕುಮಾರ್ ಅವರನ್ನು ಈ ವೇಳೆ ಸಮ್ಮಾನಿಸಲಾಯಿತು.
ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ವಿಧಾನ ಪರಿಷತ್‌ನ ವಿಪಕ್ಷದ ಮುಖ್ಯ ಸಚೇತಕ ಕ್ಯಾ| ಗಣೇಶ್ ಕಾರ್ಣಿಕ್, ವಿಭಾಗ ಸಹ ಸಂಘಟನ ಕಾರ್ಯದರ್ಶಿ ಯತೀಶ್ ಅರ್ವಾರ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಉಮಾನಾಥ ಕೋಟ್ಯಾನ್, ಸುದರ್ಶನ್ ಎಂ., ಕ್ಯಾ| ಬೃಜೇಶ್ ಚೌಟ, ಸಹ ಉಸ್ತುವಾರಿ ದರ್ಶನ್ ದೇಸಾಯಿ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಶಿವರಂಜನ್, ದಕ್ಷಿಣ ಮಂಡಲದ ಅಧ್ಯಕ್ಷ ವೇದವ್ಯಾಸ ಕಾಮತ್, ಜಿತೇಂದ್ರ ಕೊಟ್ಟಾರಿ, ರಾಜ್ಯ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪೃಥ್ವಿರಾಜ ಬಂಗೇರ, ಮಹೇಶ್, ಸಂದೇಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಮೂಡುಶೆಡ್ಡೆ ಸ್ವಾಗತಿಸಿದರು. ಉಪಾಧ್ಯಕ್ಷ ಸಂದೀಪ್ ಶೆಟ್ಟಿ ಮರವೂರು ಮತ್ತು ಕಾರ್ಯದರ್ಶಿ ದಯಾನಂದ ಕೊಣಾಜೆ ನಿರೂಪಿಸಿದರು.
Source : www.udayavani.com