ಸುಳ್ಯ: ದೇಶದ ಪ್ರತಿಯೊಬ್ಬ ನಾಗರಿಕನೂ ಆರ್ಥಿಕ ಸ್ವಾವಲಂಬಿ ಬದುಕನ್ನು ಸಾಗಿಸಬೇಕು. ಈ ನಿಟ್ಟಿನಲ್ಲಿ ಆರ್ಥಿಕ ವ್ಯವಹಾರ ಸುಸೂತ್ರವಾಗಲು ಎಲ್ಲರೂ ಬ್ಯಾಂಕ್ ವ್ಯವಹಾರ ಮಾಡಬೇಕು ಎಂಬ ದೃಷ್ಠಿಯಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ `ಜನ್‌ಧನ್’ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಬ್ಯಾಂಕ್ ಖಾತೆಯನ್ನು ಹೊಂದುವ ಮೂಲಕ ಎಲ್ಲರೂ ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಸುಳ್ಯ ಜಯನಗರ ಹಳೆಗೇಟು ವಾರ್ಡ್‌ನಲ್ಲಿ ಬ್ಯಾಂಕ್ ಖಾತೆಯ ಪಾಸ್ ಪುಸ್ತಕ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಪಾಸ್ ಪುಸ್ತಕವನ್ನು ವಿತರಿಸಿ ಅವರು ಮಾತನಾಡಿದರು.
ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ನಗರ ಪಂಚಾಯಿತಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಸದಸ್ಯರಾದ ಪ್ರಕಾಶ್ ಹೆಗ್ಡೆ, ಜಾನಕಿ ನಾರಾಯಣ, ಜಿಲ್ಲಾ ಪಂಚಾಯಿತಿ ಸದಸ್ಯ ನವೀನ್‌ಕುಮಾರ್ ಮೇನಾಲ, ಸುಳ್ಯ ಭೂ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷ ಪಿ.ಕೆ.ಉಮೇಶ್, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಸಂಜೀವ ಮಠಂದೂರು, ರಾಧಾಕೃಷ್ಣ ಬೂಡಿಯಾರ್, ನಗರ ಬಿಜೆಪಿ ಅಧ್ಯಕ್ಷ ಐ.ಬಿ.ಚಂದ್ರಶೇಖರ, ಪ್ರಧಾನ ಕಾರ್ಯದಾರ್ಶಿ ಸೋಮನಾಥ ಪೂಜಾರಿ, ಸಿಂಡಿಕೇಟ್ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ಯು.ಬಿ.ಸುರೇಂದ್ರನ್, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ಜಗದೀಶ್ ಪಡ್ಡಂಬೈಲು ಮತ್ತಿತರರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಪಿ.ಡಿ.ಅಂಬಾಬಾಯಿ ಅವರನ್ನು ಸನ್ಮಾನಿಸಲಾಯಿತು. ಜಗನ್ನಾಥ ಜಯನಗರ ಸ್ವಾಗತಿಸಿ, ಕುಸುಮಾಧರ ಕುಂದಲ್ಪಾಡಿ ವಂದಿಸಿದರು.