ಬಂಟ್ವಾಳ: ಬಿ.ಸಿರೋಡಿನ ಮುಖ್ಯ ರಸ್ತೆಯ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಎಂದು ನಾಮಕರಣ ಮಾಡಲು ಬಂಟ್ವಾಳ ಕ್ಷೇತ್ರ ಬಿ.ಜೆ.ಪಿ.ವತಿಯಿಂದ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮೂಲಕ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರಿಗೆ ಮನವಿ ಸಲ್ಲಿಸಿತು.
ಮಾಜಿ ಶಾಸಕ ರುಕ್ಮಯ ಪೂಜಾರಿಯವರ ನೇತೃತ್ವದಲ್ಲಿ ಬಿ.ಜೆ.ಪಿ.ಕಾರ್ಯಕರ್ತರು ಬುಧವಾರ ಬಿ.ಸಿರೋಡಿನ ಬಿ.ಜೆ.ಪಿ ಕಚೇರಿಗೆ ಆಗಮಿಸಿದ ಸಂಸದ ನಳಿನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಮನವಿ ಸ್ವೀಕರಿಸಿದ ನಳಿನ್ ಕೂಡಲೇ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಬೇಟಿಯಾಗಿ ಈ ಬಗ್ಗೆ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ಈ ಸಂದರ್ಭ ಬಿ.ಜೆ.ಪಿ ಮುಖಂಡ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ತಾ.ಪಂ.ಅಧ್ಯಕ್ಷ ಯಶವಂತ ಡಿ. ಜಿ.ಪಂ.ಸದಸ್ಯರಾದ ಚೆನ್ನಪ್ಪ ಕೊಟ್ಯಾನ್, ಸಂತೊಷ್ ಕುಮಾರ್ ಬೋಳಿಯಾರ್, ತುಂಗಪ್ಪ ಬಂಗೇರ, ಪುರುಷ ಎನ್ ಸಾಲಿಯಾನ್, ಮೋಹನ್ ಪಿ.ಎಸ್, ದೇವಪ್ಪ ಪೂಜಾರಿ, ದೇವದಾಸ ಶೆಟ್ಟಿ, ರಾಮ್ದಾಸ ಬಂಟ್ವಾಳ. ದಿನೇಶ್ ಭಂಡಾರಿ, ಆನಂದ ಶಂಭೂರು, ದಿನೇಶ್ ಅಮ್ಟೂರು, ಮೊದಲಾದವರಿದ್ದರು.